06/09/2026
||ಜೈ ಶ್ರೀ ಗುರುದೇವ್ ||
ದಿನಾಂಕ 05.09.2026ನೇ ಶನಿವಾರ ಅಮೇರಿಕದ ಫಿಲಡೆಲ್ಪಿಯಾದ
ಪೆನ್ಸಿಲ್ವೇನಿಯಾ ಕನ್ವೆನ್ಷನ್ ಸೆಂಟರ್‌ನಲ್ಲಿ ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಸಂಭ್ರಮವನ್ನು ಸಾರುವ *ಅಕ್ಕ ರಜತ ಮಹೋತ್ಸವದ ವಿಶ್ವ ಕನ್ನಡ ಸಮ್ಮೇಳನದ* ಉದ್ಘಾಟನಾ ಸಮಾರಂಭದಲ್ಲಿ *ಪರಮಪೂಜ್ಯ ಮಹಾಸ್ವಾಮೀಜಿಯವರು* ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಿರಿಗೆರೆ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರು, (ವಿಡಿಯೋ ಕಾನ್ಫರೆನ್ಸ್ ಮೂಲಕ) ಸಚಿವರಾದ ಶ್ರೀ ಶಿವರಾಜ ತಂಗಡಗಿ ಅವರು, ಸಂಸದರು, ಶಾಸಕರು, ಅಮೆರಿಕದ ವಿವಿಧ ರಾಜ್ಯಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ಕನ್ನಡಿಗರು ಅಕ್ಕ ಅಧ್ಯಕ್ಷರಾದ ಶ್ರೀ ಮಧು ರಂಗಯ್ಯ ಅವರು, ಅಕ್ಕ ಟ್ರಸ್ಟಿ ಮಂಡಳಿ ಅಧ್ಯಕ್ಷರಾದ ಡಾ. ಅಮರನಾಥ ಗೌಡ ಅವರು ಸೇರಿದಂತೆ ಕೂಟದ ಎಲ್ಲಾ ಪದಾಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ವಿಶ್ವ ಒಕ್ಕಲಿಗರ ಜಾಗೃತಿ ವೇದಿಕೆ
Sri Sri Sri Dr. Nirmalanandanatha Mahaswamiji