12/11/2021
ಶ್ರೀ ಚಕ್ರದ ಉದಯ.
# # # #---------------- # # # #
ಪಗಡೆಯಾಟ (ಮಗುವಿನ ಗೆಲುವು ತಾಯಿಗೆ ಸಂತೋಷ)
ಆಟ ಪ್ರಾರಂಭವಾಯಿತು.
ದೇವಸ್ಥಾನದ ಅರಿಸಿನ, ಕುಂಕುಮ, ಗಂಧದ ಪುಡಿಗಳನ್ನು ಉಪಯೋಗಿಸಿ ಪಗಡೆ ಆಟದ ನಕ್ಷೆಯನ್ನು ಶ್ರೀಗಳವರು ಬರೆದರು.ದೇವಿ ತನ್ನ ಶಕ್ತಿಯಿಂದ ದಿವ್ಯ ದಾಳಿಗಳನ್ನು ಸೃಷ್ಟಿಸಿದಳು! ಶಂಕರರು ಪೂಜೆಗಾಗಿ ದೇವಿಗೆ ಬಳಸಿದ್ದ ಹೂವುಗಳನ್ನು ಆಟದಲ್ಲಿ ತಮ್ಮ ನಡಿಗೆಯ ಕಾಯಿಗಳನ್ನಾಗಿಯೂ, ಅವಳ ಆಭರಣದ ಮುತ್ತು ರತ್ನಗಳನ್ನು ಬಳಸಿ ಅವಳ ನಡಿಗೆಯ ಕಾಯಿಗಳನ್ನಾಗಿಯೂ ಸಿದ್ಧಪಡಿಸಿದರು.
ದೇವಿ ಆಟವಾಡಲೆಂದು ಗರ್ಭಗುಡಿಯ ಪೀಠದ ಮೇಲೆ ಕುಳಿತಳು.ಶ್ರೀಗಳವರು ಅವಳೆದುರು ಪದ್ಮಾಸನ ಹಾಕಿ ಗರ್ಭಗುಡಿಯ ಹೊಸ್ತಿಲ ಹೊರಗೆ ಕುಳಿತು ಆಟ ಪ್ರಾರಂಭಿಸಿದರು.ಹಾಗೆಯೇ ಪ್ರಶಸ್ತವಾದ ಆ ಕಾಲ ವ್ಯರ್ಥವಾಗದಂತೆ ಲಲಿತಾ ಸಹಸ್ರನಾಮದ ಬೇರೆ ಬೇರೆ ನಾಮಗಳನ್ನು ಜಪಿಸುತ್ತಾ ಆಟ ಮುಂದುವರೆಸಲು ದೇವಿಯ ಅಪ್ಪಣೆ ಬೇಡಿದರು.ಅಷ್ಟೇ ಅಲ್ಲ ದೇವಿ ತನಗೆ ಬೇಕಾದ ಗರ ಬೀಳುವಂತೆ ಹೊಂದಿದ್ದ ಶಕ್ತಿಯನ್ನು ತಮಗೂ ಅನುಗ್ರಹಿಸಿ ತಮಗೆ ಬೇಕಾದ ಗರ ಬೀಳಿಸಿಕೊಳ್ಳಲು ಸಹಾಯ ಮಾಡಬೇಕೆಂದು ಕೇಳಿಕೊಂಡರು.ದೇವಿ ಉದಾರತೆಯಿಂದ ಅನುಗ್ರಹಿಸಿದಳು. ಆಟ ಪ್ರಾರಂಭವಾಯಿತು.ಮೊದಲು ದಾಳಿ ಉರುಳಿಸಿದವರು ಶ್ರೀಗಳೇ, ಬಿದ್ದ ಗರ ಒಂಬತ್ತು! ಅವರು 'ಶ್ರೀ ಚಕ್ರರಾಜ ನಿಲಯಾ' ಎಂದು ದೇವಿಯ ನಾಮ ಹೇಳಿ, ತಮ್ಮ ಕಾಯಿ ನಡೆಸುವ ಮುನ್ನ ಶ್ರೀಚಕ್ರ ನಿಲಯಳಾಗಿರುವ ದೇವಿಯ ಶ್ರೀಚಕ್ರಕ್ಕೆ ಒಂಬತ್ತು ಆವರಣಗಳಿರುವುದರನ್ನು ಹೇಳಿ ಅದರ ಸಂಕೇತವಾಗಿ ಒಂಬತ್ತು ಅವರಣಗಳ ಗೆರೆಗಳನ್ನು ಪಕ್ಕದಲ್ಲಿ ಬರೆದರು.
ಆಟ ಮುಂದೆ ಸಾಗಿತು, ಹೀಗೆ ಒಂದೊಂದು ಗರ ಬಿದ್ದಾಗಲೂ ಅದಕ್ಕೆ ಸರಿಹೊಂದುವ ಅಕ್ಷರ ಸಂಖ್ಯೆಗಳಿದ್ದ ದೇವಿಯ ನಾಮಗಳನ್ನು ಹೇಳಿ ಆ ಸಂಖ್ಯೆಗೆ ಅನುಸಾರವಾಗಿ ಬೀಜಾಕ್ಷರಗಳನ್ನು ಬಳಸಿ ಗೆರೆಗಳಿಂದ ನಿರ್ಮಿತವಾದ ರೇಖಾಕೃತಿಗಳನ್ನು ರಚಿಸತೊಡಗಿದರು.
ಹಾಗೆ ರಚಿಸಿದ ಶ್ರೀಚಕ್ರದ ರೇಖಾಕೃತಿಯಲ್ಲಿ ಹಿಂದಿನ ಶ್ರೀಚಕ್ರದಲ್ಲಿದ್ದ ಉಗ್ರ ಬೀಜಾಕ್ಷರಗಳನ್ನು ತೆಗೆದುಹಾಕಿ ಅವುಗಳ ಸ್ಥಾನದಲ್ಲಿ ಅದೇ ಸಂಖ್ಯೆಗೆ ಅನುಗುಣವಾಗಿ ಹೊಂದಿಕೊಳ್ಳಬಹುದಾದ ಸಾತ್ವಿಕ ಬೀಜಾಕ್ಷರಗಳನ್ನು ತುಂಬಿ ಸಮೀಕರಣ ಸರಿಹೊಂದಿಸಿದರು.
ಅಕ್ಷರಗಳು ಬದಲಾದುದರಿಂದ ಮಂತ್ರವೇ ತಿರುವು ಮುರುವು ಆಗುವಂತೆ ಮಾಡಿ ತಾವು ಹೊಸದಾಗಿ ರಚಿಸಿದ ರೇಖಾ ವಿನ್ಯಾಸದಲ್ಲಿ ಬಿಂದು, ತ್ರಿಕೋಣ, ವಸುಕೋಣ ದಶಾರ ಯುಗ್ಮ ಮನ್ವಸ್ತ್ರ ನಾಗದಳ ಷೋಡಶಾ ಪತ್ರ ವೃತ್ತ ತ್ರಯ ಹಾಗೂ ಭೂಪುರಗಳನ್ನೊಳಗೊಂಡ ಮಂಗಳದಾಯಕ ಶ್ರೀಚಕ್ರವನ್ನು ಪ್ರತಿಷ್ಟಿಸಿದರು.ಈ ವೇಳೆಗೆ ಮೂರು ಯಾಮಗಳು ಕಳೆದುವೆಂದು (ಸೂಚಿಸುವ) ತಿಳಿಸುವ ನಗರದ ಬೆಳಗಿನ ಝಾವದ ಕಹಳೆ ಶಬ್ದವಾಯಿತು. ದೇವಿ ಥಟ್ಟನೆ ಎಚ್ಚೆತ್ತಳು.
ಆಟದಲ್ಲಿ ತಾನು ಮಗ್ನಳಾಗಿ ತನ್ನ ನಿತ್ಯ ಅಭ್ಯಾಸವನ್ನು ಮರೆತು ಅಂದು ಸಂಹಾರ ಕ್ರಿಯೆ ನಡೆಸಲಿಲ್ಲವೆಂದು ಅವಳಿಗೆ ಖೇದವಾಯಿತು! ಈ ವೇಳೆಗಾಗಲೇ ಆಟವು ಅಂತ್ಯದ ಘಟ್ಟಕ್ಕೆ ತಲುಪಿತು.ಶಂಕರರು ಹಣ್ಣಿಗೆ ಬರುವ ದ್ವಾರದ ಬಳಿಯಲ್ಲಿ ತಮ್ಮ ಕೊನೆಯ ಕಾಯಿಗಳನ್ನು ತಂದು ನಿಲ್ಲಿಸಿದ್ದರು ಆದರೆ ದೇವಿ ತನ್ನ ಕಾಯಿಯನ್ನು ಹಣ್ಣಿನ ಮನೆಯ ಒಳಗೆ ತಂದಿದ್ದಳು.
ಅಷ್ಟೇ ಅಲ್ಲ ಆಟದ ಕೊನೆ ಗರ ಹಾಕುವ ಸರದಿಯೂ ಅವಳದಾಗಿತ್ತು ಎರಡು ಸಂಖ್ಯೆಯ ಗರ ಹಕಿ 'ದುಗ' ಎಂದು ಹೇಳುತ್ತಾ ಕಾಯಿಯನ್ನು ಹಣ್ಣು ಮಾಡಿಯೇ ಬಿಟ್ಟಳು.
ಶ್ರೀಗಳವರು ಆಟದಲ್ಲಿ ಸೋತಿದ್ದರು!
ಆದರೆ ಅವರು ತಮ್ಮ ಉದ್ದೇಶದಲ್ಲಿ ಗೆದ್ದಿದ್ದರು. ಪಂದ್ಯದ ನಿಯಮದಂತೆ ದೇವಿ ಅವರನ್ನು ಕಬಳಿಸಿ ಮರುದಿನದಿಂದ ತನ್ನ ಸಂಹಾರ ಕ್ರಿಯೆ ಮುಂದುವರೆಸಬಹುದಾಗಿತ್ತು!
ಆದರೆ ಶಂಕರರ ಬುದ್ಧಿವಂತಿಕೆಯಿಂದ ಅವಳ ಆವಾಸಸ್ಥಾನವಾದ ಶ್ರೀಚಕ್ರದ ಬೀಜ ಮಂತ್ರಗಳೆಲ್ಲ ತಿರುವು ಮುರುವಾಗಿ, ಕ್ಷುದ್ರ ಸಿದ್ಧಿಗಾಗಿ ನೀಚ ಜನರು ಅವಳನ್ನು ಆಹ್ವಾನಿಸಿದರೆ, ಶ್ರೀಚಕ್ರ ಬಿಟ್ಟು ಹೋಗದಂತೆ ನಿಯೋಜಿಸಿದ ಶ್ರೀಚಕ್ರದ ಬಿಂದು ಸ್ಥಾನದಲ್ಲಿ ಅಕ್ಷರ ಸಂಖ್ಯಾಶಾಸ್ತ್ರದ ಮೇರೆಗೆ ಅವಳು ಬಂಧಿತಳಾಗಿದ್ದಳು!
ದೇವಿ ಪಂದ್ಯದ ನಿಯಮವನ್ನು ಶಂಕರರಿಗೆ ಜ್ಞಾಪಿಸಿ ತನ್ನ ಸಂಹಾರ ಕಾರ್ಯ ಮುಂದುವರೆಸುವೆನೆಂದಾಗ ಶಂಕರರು ತುಂಟು ನಗೆ ಬೀರಿರಬೇಕು! ಶ್ರೀಚಕ್ರದ ಬಿಂದು ಸ್ಥಾನದಲ್ಲಿ ಶಂಕರರಿಂದ ಬಂಧಿತಳಾಗಿದ್ದ ದೇವಿ ಮತ್ತೆ ಎಂದೂ ಉಗ್ರ ಬೀಜಾಕ್ಷರಗಳ ಮಂತ್ರಕ್ಕೆ ಮಣಿದು ಉಗ್ರರೂಪ ತಾಳಿ ಪೀಠ ಬಿಡುವಂತಿರಲಿಲ್ಲ ಮಗುವಿನ ಗೆಲುವು ತಾಯಿಗೆ ಸಂತೋಷ ತರುವಂತೆ ದೇವಿ ಶಂಕರರ ಮೇಲೆ ಪ್ರಸನ್ನಳಾಗಿ ತನ್ನ ಬಂಧನವನ್ನು ಸಂತೋಷದಿಂದ ಒಪ್ಪಿದಳು.ಸಂಖ್ಯಾಶಾಸ್ತ್ರದಲ್ಲಿ ಸಂಖ್ಯೆಗಳಿಗೆ ಹಾಗೂ ಅಕ್ಷರಗಳಿಗೆ ವಿಶಿಷ್ಟ ಮಾನ್ಯತೆಯ ಸ್ಥಾನಗಳಿವೆ.ಒಂದರಿಂದ ಒಂಬತ್ತರವರೆಗಿನ ಸಂಖ್ಯೆಗಳನ್ನು ಶೂನ್ಯದೊಡನೆ ಸೇರಿಸಿ ಅಸಂಖ್ಯ ಸಂಖ್ಯೆಗಳನ್ನು ಪಡೆಯಬಹುದು.
ಹಾಗೆಯೇ ವರ್ಣಮಾಲೆಯ 'ಆ' ನಿಂದ 'ಹ' ವರೆಗಿನ ಅಕ್ಷರಗಳನ್ನು ಬೇರೆ ಬೇರೆ ವಿಧದಲ್ಲಿ ಸ್ವರಗಳೊಡನೆ ಜೋಡಿಸುವುದರಿಂದ ಅಸಂಖ್ಯ ಮಂತ್ರ ಬೀಜಾಕ್ಷರಗಳ ನಿರ್ಮಾಣವಾಗುತ್ತವೆ.ಹೀಗೆ ನಿರ್ಮಾಣವಾಗುವ ಮಂತ್ರ ಸ್ತೋತ್ರ, ನಾಮಗಳ ಸಂಖ್ಯೆಯೂ ಬಹಳವಾಗಿದ್ದು ಅಕ್ಷರ ಮಾಲೆಯ ವರ್ಣ ಹಾಗೂ ಸಂಖ್ಯಾಶಾಸ್ತ್ರದ ಸಂಖ್ಯೆಗಳು ಒಂದಕ್ಕೊಂದು ಪೂರಕವಾಗಿರುತ್ತವೆ.
ಒಂದ ಅಕ್ಷರ ಹೆಚ್ಚಾದರೂ, ಒಂದು ಅಕ್ಷರ ಲುಪ್ತವಾದರೂ ಕೊನೆಗೆ ಅಕ್ಷರದ ಅಲ್ಪಪ್ರಾಣ, ಮಹಾಪ್ರಾಣ ಅಥವಾ ಒತ್ತುಗಳಲ್ಲಿ ವ್ಯತ್ಯಾಸವಾದರೂ ಅರ್ಥ ಬದಲಾಯಿಸಿ ಮಂತ್ರಗಳ ಉದ್ದೇಶವೇ ಬದಲಾಗಿಬಿಡುತ್ತವೆ.ಕೆಲವೊಮ್ಮೆ ಅನರ್ಥವೂ ಆಗಿಬಿಡುತ್ತದೆ. ಶ್ರೀಚಕ್ರದಲ್ಲಿ ಅಲ್ಲಿಯವರೆಗೆ ಉಗ್ರ ಬೀಜಾಕ್ಷರಗಳ ಸ್ಥಾಪನೆಯಿಂದ ಇಂತಹುದೇ ಅನರ್ಥವಾಗಿತ್ತು.
ಒಂದು ಅಕ್ಷರಕ್ಕೆ ಅಥವಾ ಕೆಲವು ಅಕ್ಷರಗಳಿಗೆ ಒಂದು ಸಂಖ್ಯೆಯೊಡನೆ ತಾದಾತ್ಮ್ಯಗೊಳಿಸಿದಾಗ, ಒಂದು ಸಂಖ್ಯೆ, ಒಂದು ಅಕ್ಷರಕ್ಕೆ ಇಲ್ಲವೇ ಅನೇಕ ಅಕ್ಷರಗಳ ಸಂಕೇತವಾಗುತ್ತದೆ.
ಹೀಗೆ ವರ್ಣಮಾಲೆಯ 'ಅ' ನಿಂದ 'ಅಂ' ವರೆಗೆ 'ಕ' ನಿಂದ 'ಕ್ಷ' ವರೆಗೆ ಕೆಲವು ಸಂಖ್ಯೆಗಳನ್ನು ಸಂಕೇತ ಮಾಡಿ ನೆನಪಿನಲ್ಲಿಟ್ಟುಕೊಂಡರೆ ಮಂತ್ರಕ್ಕೂ ಸಂಖ್ಯೆಗೂ ಅದ್ಭುತ ಹೊಂದಾಣಿಕೆಯಾಗುತ್ತದೆ. ಅದರ ಪರಿಣಾಮವಾಗಿ ಸಂಕಲ್ಪ ಉದ್ದೇಶಗಳೂ ಬದಲಾಗುತ್ತದೆ.ಆಟದ ನಡುವೆ ಸ್ತೋತ್ರ ಮಂತ್ರವನ್ನು ಬಾಯಿಯಲ್ಲಿ ಹೇಳುತ್ತಿದ್ದ ಶಂಕರರು ತಮಗೆ ಬಿದ್ದ ಗರಗಳ ಸಂಖ್ಯ
ಸಾಧಕರಿಂದ ಅದುವರೆವಿಗೂ ಸ್ಥಾಪಿತವಾಗಿದ್ದ ಉಗ್ರ ಬೀಜಗಳಿಂದ ಆವಾಹಿತಳಾದ ದೇವಿ ಉಗ್ರ ಸ್ವರೂಪ ತಾಳಿ ಮದಘೂರ್ಣಿತ ರಕ್ಷಾಕ್ಷಿಯಾಗಿ ಪಾಂಡ್ಯರಾಜನ ಪ್ರಜೆಗಳನ್ನು ಬಲಿ ತೆಗೆದುಕೊಳ್ಳುತ್ತಿದ್ದಳು.
ಆದರೆ ಶ್ರೀ ಶಂಕರಾಚಾರ್ಯರು ಯುಕ್ತಿಯಿಂದ ಆ ಉಗ್ರ ಬೀಜಾಕ್ಷರಗಳನ್ನು ಬದಲಿಸಿ ಅವುಗಳ ಸ್ಥಾನದಲ್ಲಿ ಸಾತ್ವಿಕ ಬೀಜಾಕ್ಷರಗಳನ್ನು ಜೋಡಿಸಿ ದೇವಿಯನ್ನು ಬಿಂದು ಸ್ಥಾನದಲ್ಲಿ ನಿಲ್ಲಿಸಿ ಅವಳು ಉಗ್ರಶಕ್ತಿಗಳಿಗೆ ಮಣಿಯುವ ಬದಲಾಗಿ ಬಿಂದು ತರ್ಪಣ ಸಂತುಷ್ಟಳಾಗಿ, ಶ್ರದ್ಧೆಗಳಿಂದ ಆರಾಧಿಸುವವರ ಮನೋಕಾಮನೆಗಳನ್ನು ಕರುಣಿಸುವ ಕಾಮಧೇನು,ಕಲ್ಪವೃಕ್ಷವಾಗಿ ತನ್ನ ಮಂದಹಾಸದಿಮದ ಪತಿಯನ್ನು ಮುದಗೊಳಿಸುವ 'ಮಂದಸ್ಮಿತ ಪ್ರಭಾಪೂರ'ದಿಂದ ಕೂಡಿ ಶ್ರೀಚಕ್ರದಲ್ಲಿ ನೆಲೆಯಾಗುವಂತೆ ಮಾಡಿದ್ದರು.....